ಪುರಸಭೆಯಲ್ಲಿ ಕಾಂಗ್ರೆಸ್ ಭಿನ್ನಮತ ಸ್ಫೋಟ..

Kannada News

06-11-2017

ದೇವನಹಳ್ಳಿ: ದೇವಹಳ್ಳಿ ತಾಲ್ಲೂಕಿನ ವಿಜಯಪುರದ ಕಾಂಗ್ರೆಸ್ ಪುರಸಭಾ ಸದಸ್ಯರು ಮತ್ತು ಮಾಜಿ ಶಾಸಕ ವೆಂಕಟಸ್ವಾಮಿ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದು, ಭಿನ್ನಮತ ಸ್ಫೋಟಗೊಂಡಿದೆ.

ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಪುರಸಭೆ ಸದಸ್ಯೆ ಪದ್ಮಾವತಿ ರಾಜಗೋಪಾಲ್‌ ಅವರನ್ನು ಜೆಡಿಎಸ್‌ ನವರು ಎಂದಿರುವುದು ಪುರಸಭೆ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ವೆಂಕಟಸ್ವಾಮಿ ಅವರು ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸುತ್ತಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಪುರಸಭಾ ಸದಸ್ಯರು ಆರೋಪಿಸಿದ್ದಾರೆ. ಅದಲ್ಲದೇ ಈ ವಿಚಾರವಾಗಿ ಸಂಸದ ವೀರಪ್ಪ ಮೊಯ್ಲಿಗೆ ದೂರು ನೀಡುತ್ತೇವೆ ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ದೇವಹಳ್ಳಿ ಮಾಜಿ ಶಾಸಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ