ಸಿಎಂ ವಿರುದ್ಧ ಶೆಟ್ಟರ್ ಗಂಭೀರ ಆರೋಪ

Kannada News

06-11-2017

ಹುಬ್ಬಳ್ಳಿ: ರಾಜಕಾರಣಿಗಳ ಕುಮ್ಮಕ್ಕಿನಿಂದಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಕೇಳಿ ಬರುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಕೈವಾಡವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಇಂದಿಲ್ಲಿ ಆರೋಪ ಮಾಡಿದ್ದಾರೆ.

ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಲಿಂಗಾಯಿತರು ಮತ್ತು ವೀರಶೈವರಲ್ಲಿ ಒಡಕು ಮೂಡಿಸಿ, ಒಡೆದು ಆಳುವ ನೀತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಸರಿಸುತ್ತಿದ್ದಾರೆ, ಅವರ ಯತ್ನ ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಲಿಂಗಾಯಿತ ಪ್ರತ್ಯೇಕ ಧರ್ಮಕ್ಕಾಗಿ ನಡೆದ ಸಮಾವೇಶದಲ್ಲಿ ಕೆಲ ಸ್ವಾಮೀಜಿಗಳು, ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಇದು ಸರಿಯಿಲ್ಲ, ಸ್ವಾಮೀಜಿಗಳಾಗಿ ಸಮಾಜಕ್ಕೆ ಮಾರ್ಗದರ್ಶನ ಮಾಡುವುದರಿಂದ ಈ ರೀತಿಯ ಮಾತುಗಳು ಒಳ್ಳೇಯ ಬೆಳವಣಿಗೆಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಕೈವಾಡ ಅಭಿಪ್ರಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ