ಸದ್ಯಕ್ಕಿಲ್ಲ ಲಾರಿ ಮುಷ್ಕರ...

Kannada News

07-11-2017

ಬೆಂಗಳೂರು: ಆರ್‌.ಟಿ.ಒ ಅಧಿಕಾರಿಗಳಿಂದ ಎದುರಾಗುವ ಕಿರುಕುಳ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಇದೇ 10 ರಿಂದ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಸಲು ಮುಂದಾಗಿದ್ದ ಲಾರಿ ಮಾಲೀಕರ ಸಂಘಟನೆಗಳು ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿವೆ. ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರೊಂದಿಗೆ ರಾಜ್ಯ ಮಾಲೀಕರ ಸಂಘಟನೆಗಳ ಒಕ್ಕೂಟದ ವಿವಿಧ ಲಾರಿ ಮಾಲೀಕರ ಸಂಘಟನೆಗಳ, ಪದಾಧಿಕಾರಿಗಳು ನಡೆಸಿದ ಸಭೆ ಫಲಪ್ರದವಾದ ಹಿನ್ನೆಲೆಯಲ್ಲಿ ಒಂದು ತಿಂಗಳ ಮಟ್ಟಿಗೆ ಮುಷ್ಕರವನ್ನು ಮುಂದೂಡಲು ಲಾರಿ ಮಾಲೀಕರ ಸಂಘ ನಿರ್ಧರಿಸಿದೆ.

ಆರ್‌.ಟಿ.ಒ ಅಧಿಕಾರಿಗಳಿಂದ ಕಿರುಕುಳ, ಟೋಲ್ ಸೇರಿದಂತೆ ವಿವಿಧ ಲಾರಿ ಮಾಲೀಕರ ಬೇಡಿಕೆ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಬಗೆಹರಿಸುವುದಾಗಿ ಸಾರಿಗೆ ಸಚಿವ ರೇವಣ್ಣ ಲಾರಿ ಮಾಲೀಕರ ಸಂಘಟನೆಗಳ ಪದಾಧಿಕಾರಿಗಳಿಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಆರ್‌.ಟಿ.ಒ ಲಾರಿ ಮುಷ್ಕರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ