ಟಿಪ್ಪು ಜಯಂತಿ: ಅಮೇರಿಕದಿಂದ ಬೆದರಿಕೆ ಕರೆ..?

Kannada News

07-11-2017

ಬೆಂಗಳೂರು: ಟಿಪ್ಪು ಜಯಂತಿಯ ಪರ ಹಾಗೂ ವಿರೋಧ ಚರ್ಚೆ ಹೆಚ್ಚುತ್ತಿರುವ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯೊಬ್ಬರಿಗೆ, ಟಿಪ್ಪು ಜಯಂತಿ ವಿರೋಧಿಸಿದರೆ ತಲೆ ತೆಗೆಯುವುದಾಗಿ ಜೀವ ಬೆದರಿಕೆ ಹಾಕಿ ಮೊಬೈಲ್ ಕರೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿಗೆ ಹಮ್ಮಿಕೊಂಡಿದ್ದ ಟಿಪ್ಪು ಜಯಂತಿ ವಿರೋಧಿ ಹೋರಾಟದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಸಂದೀಪ್ ಕುಮಾರ್ ಭಾಗಿಯಾಗಿ ಟಿಪ್ಪು ಜಯಂತಿ ಆಚರಣೆಯನ್ನು ಖಂಡಿಸಿದ್ದರು. ಸಮಾವೇಶ ಮುಗಿದ ದಿನವೇ ರಾತ್ರಿ 1 ಗಂಟೆಗೆ ವೇಳೆಗೆ, ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಂದೀಪ್ ಹೇಳಿದ್ದಾರೆ. ಅಮೆರಿಕದಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಮೊಬೈಲ್ ಕರೆಯ ವಿವರಗಳೊಂದಿಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಸಂದೀಪ್ ದೂರು ದಾಖಲಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ