ಕತ್ತಲೆ ಭಾಗ್ಯ..!

Kannada News

08-11-2017

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನಿಯಮಿತ ಲೋಡ್​ ಶೆಡ್ಡಿಂಗ್​ ಪ್ರಾರಂಭವಾಗಲಿದ್ದು, ಕತ್ತಲೆ ಭಾಗ್ಯ ನೀಡಲು ಸರ್ಕಾರ ಸಜ್ಜಾಗಿದೆ. ತಾಂತ್ರಿಕ ದೋಷದಿಂದ ವಿದ್ಯುತ್​ ಉತ್ಪಾದನೆಯಲ್ಲಿ ಕೊರತೆ ಉಂಟಾಗಿರುವ ಕಾರಣ, ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಉಂಟಾಗಿರುವ ವಿದ್ಯುತ್ ಕೊರತೆ ನೀಗಿಸಲು ಐಇಎಕ್ಸ್​​​ನಲ್ಲಿ ವಿದ್ಯುತ್ ಖರೀದಿಸಿ ಸರಬರಾಜು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈಗಾಗಲೆ ಲೋಡ್ ಶೆಡ್ಡಿಂಗ್ ನಿಂದ ಜನರಿಗೆ ತೊಂದರೆಯಾಗುತ್ತಿದ್ದು, ಇನ್ನು ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದ ಜನರಿಗೆ ಹೆಚ್ಚಿನ ತೊಂದರೆ ತಪ್ಪಿದ್ದಲ್ಲ.  ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ