ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹ

Kannada News

08-11-2017

ಮೈಸೂರು: ರೈತರ ಸಂಪೂರ್ಣ ಸಾಲ ಮನ್ನಾಕ್ಕೆ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ. ಮೈಸೂರು ನಗರದ, ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿಂದು, ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಅರ್ಜಿ ಸಲ್ಲಿಕೆ ಸಮಾವೇಶವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ ಮಾಡದಿದ್ದರೆ ಮುಂಬರುವ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು. ರೈತ ಸಮಾವೇಶದಲ್ಲಿ ಜಿಲ್ಲೆಯ ಸಾವಿರಾರು ರೈತರು ಭಾಗವಹಿಸಿದ್ದು, ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಸುಮಾರು 15 ಸಾವಿರ ರೈತರು ಅರ್ಜಿ ಸಲ್ಲಿಸಿದ್ದಾರೆ ಎಂದರು.

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ