‘ಜೆಡಿಎಸ್ ಯೋಜನೆ, ಕಾಂಗ್ರೆಸ್ ಬಿಟ್ಟಿ ಪ್ರಚಾರ’

Kannada News

08-11-2017

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನ ಸಭಾ ಕ್ಷೇತ್ರದ ಮುಗುಳವಳ್ಳಿಯ ಧರ್ಮಪಾಲ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದು, ಬೆಳಗಿನ ಉಪಹಾರ ಸವಿದರು.

ನಂತರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾಹೀರಾತು ಸರ್ಕಾರ, ಕೇವಲ ಪ್ರಚಾರಕ್ಕಾಗಿ ಜಾಹೀರಾತುಗಳಿಗೆ ಕೋಟಿ ಕೋಟಿ ಹಣ ವೆಚ್ಚ ಮಾಡುತ್ತಿದೆಯೇ ಹೊರತು, ರಾಜ್ಯದ ಜನರಿಗೆ ಯಾವುದೇ ಅನುಕೂಲ ಕಲ್ಪಿಸುತ್ತಿಲ್ಲ ಎಂದು, ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಜನ ಸಾಮಾನ್ಯರಿಗೆ ಬೇಕಾದ ಯಾವುದೇ ಸಣ್ಣ ಕೆಲಸಗಳನ್ನೂ ಮಾಡಿಲ್ಲ. ಬದಲಿಗೆ ಕೇವಲ ಜಾಹೀರಾತುಗಳ ಮೂಲಕ ಪ್ರಚಾರ ಪಡೆಯುತ್ತಿದೆ. ಇದಕ್ಕಾಗಿ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ದೂರಿದರು.

ರಾಜ್ಯದ ಜನರಿಗೆ ಸಾಲ ಭಾಗ್ಯ ನೀಡಿದ್ದೇ ಸಿಎಂ ಸಿದ್ದರಾಮಯ್ಯ ಅವರ ಸಾಧನೆ. ಇದನ್ನು ಬಿಟ್ಟು ಮತ್ಯಾವುದೇ ಯೋಜನೆಗಳನ್ನು ರಾಜ್ಯ ಸರ್ಕಾರ ರೂಪಿಸಿಲ್ಲ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಜಾರಿಗೆ ತಂದಿದ್ದ ಯೋಜನೆಗಳಿಗೇ ಭಾಗ್ಯದ ರೂಪ ನೀಡಿ ಬಿಟ್ಟಿ ಪ್ರಚಾರ ಪಡೆಯುತ್ತಿದೆ ಎಂದರು. ಸಿದ್ದರಾಮಯ್ಯ ಕೇವಲ ದುರಹಂಕಾರ ಮಾತುಗಳ ಮೂಲಕ ಜನರ ಸಂಯಮವನ್ನು ಪರೀಕ್ಷೆ ಮಾಡುತ್ತಿದ್ದಾರೆ, ಮುಂದಿನ ಚುನಾವಣೆಯಲ್ಲಿ ಜನ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Kannada News Karnataka ಜಾಹೀರಾತು ಕಡೂರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ