ನವೆಂಬರ್ 10ಕ್ಕೆ ಕೊಡಗು ಬಂದ್..

Kannada News

08-11-2017

ಕೊಡಗು: ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಹಿನ್ನೆಲೆ, ಟಿಪ್ಪು ವಿರೋಧಿ ಹೋರಾಟ ಸಮಿತಿಯಿಂದ ಕೊಡಗು ಬಂದ್ ಗೆ ಕರೆ ನೀಡಿದ್ದಾರೆ. ನವೆಂರ್ 10ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಮಾಡಲಾಗುವುದೆಂದು ‘ಅಭಿಮನ್ಯು ಕುಮಾರ್ ಹೋರಾಟ ಸಮಿತಿ’ ಅಧ್ಯಕ್ಷ ಅಭಿಮನ್ಯು ಕುಮಾರ್ ತಿಳಿಸಿದ್ದಾರೆ.

ನವೆಂಬರ್ 10 ರಂದು ಮೂರೂ ತಾಲ್ಲೂಕುಗಳಲ್ಲೂ ಕುಟ್ಟಪ್ಪ ಹುತಾತ್ಮ ದಿನಾಚರಣೆ ಆಚರಣೆ ಮಾಡುವುದಾಗಿಯೂ ತಿಳಿಸಿದ್ದಾರೆ. ಅದಲ್ಲದೇ ಟಿಪ್ಪು ಜಯಂತಿಗೆ ಪ್ರಭಲ ಪ್ರತಿರೋಧ ಒಡ್ಡುವ ಎಚ್ಚರಿಕೆಯನ್ನೂ ನೀಡಿದ್ದು, ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ ಎಂದು ಆರೋಪಿಸಿದ್ದಾರೆ.

ಇದೇ ನವೆಂಬರ್ 10ರಂದು, ಶಾಲಾ ಕಾಲೇಜು, ಆಟೋ, ಖಾಸಗಿ ಬಸ್ ಸಂಚಾರ ಸ್ಥಗಿತ ಸೇರಿದಂತೆ ತೋಟದ ಕೆಲಸ ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಜಯಂತಿ ಆಚರಣೆಯಿಂದಾಗುವ ಅನಾಹುತಗಳಿಗೆ ಜಿಲ್ಲಾಡಳಿತವೇ ಹೊಣೆ ಎಂದು ಅಭಿಮನ್ಯುಕುಮಾರ್ ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ