ಸ್ಕೂಟರ್‍ ಸವಾರನ ಮೇಲೆ ಹರಿದ ಬಸ್..

Kannada News

08-11-2017

ಬೆಂಗಳೂರು: ನಗರದ ಓಕಳಿಪುರಂ ಬಳಿಯ ಸುಜಾತ ಚಿತ್ರಮಂದಿರದ ಬಳಿ ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು, ಸ್ಕೂಟರ್‍ ನಲ್ಲಿ ಹೋಗುತ್ತಿದ್ದ, ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ನರಸಿಂಹಮೂರ್ತಿ ಅವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ರಾಜಾಜಿನಗರದಲ್ಲಿ ನಿವೃತ್ತ ಜೀವನ ಸಾಗಿಸುತ್ತಿದ್ದ ನರಸಿಂಹಮೂರ್ತಿ(65)ಅವರು ನಿನ್ನೆ ಸಂಜೆ 6.30ರ ವೇಳೆ ಹೊಂಡಾ ಅಕ್ಟೀವಾ ಸ್ಕೂಟರ್‍ ನಲ್ಲಿ ರಾಜಾಜಿನಗರದ ಕಡೆಯಿಂದ ಓಕಳಿಪುರಂ ಬಳಿಯ ಸುಜಾತ ಚಿತ್ರಮಂದಿರದ ಕಡೆಗೆ ಹೋಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಸ್ಕೂಟರ್‍ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ನರಸಿಂಹಮೂರ್ತಿ ತಲೆಯ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಡೆದ ನಂತರ ಕೆಎಸ್‍ಆರ್‍ಟಿಸಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಇನ್ಸ್ ಪೆಕ್ಟರ್ ಅಂಜುಮಾಲಾ ನಾಯಕ್ ಅವರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ