ವೇಶ್ಯಾವಾಟಿಕೆ: ಇಬ್ಬರು ಯುವತಿಯರ ರಕ್ಷಣೆ

Kannada News

08-11-2017

ಬೆಂಗಳೂರು: ಹೊರಮಾವುವಿನ ಭುವನೇಶ್ವರಿ ನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಅಮೃತಹಳ್ಳಿ ಪೊಲೀಸರು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

ಶ್ರೀರಂಗಪಟ್ಟಣದ ಅರ್ಜುನ್ (22), ಕಗ್ಗಲಿಪುರದ ಛಲಪತಿ (29) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಉದ್ಯೋಗ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆಗೆ ತಳ್ಳಿದ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ಭುವನೇಶ್ವರಿ ನಗರದ ಹೊರಮಾವು ಬಳಿ ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯಾಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

 

 

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ