ಆತನ ಬ್ಯಾಗ್ ನಲ್ಲಿದ್ದವು 2 ಸಜೀವ ಗುಂಡು

Kannada News

08-11-2017 372

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಬಳಿ 22 ನಂಬರ್‍ ನ ಎರಡು ಸಜೀವ ಗುಂಡುಗಳು ಪತ್ತೆಯಾಗಿದ್ದು, ಆರೋಪಿಯನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಬಾದೆ ದಾನೇಶ್ವರ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ನವೆಂಬರ್ 2 ರಂದು ಕೆಐಎಎಲ್‍ನಿಂದ ಪುಣೆಗೆ ಸ್ಪೈಸ್ ಜೆಟ್ ವಿಮಾನ ಸಂಖ್ಯೆ ಎಸ್‍ಜಿ 424ನಲ್ಲಿ ಪ್ರಯಾಣ ಮಾಡಲು ಯತ್ನಿಸಿದ್ದನು. ಈ ಸಂದರ್ಭದಲ್ಲಿ ನಿರ್ಬಂಧಿತ ಪ್ರದೇಶದಲ್ಲಿ ಹ್ಯಾಂಡ್ ಬ್ಯಾಗ್ ಮುಖಾಂತರ ಗುಂಡುಗಳನ್ನು ಕೊಂಡೊಯ್ಯುತ್ತಿದ್ದನು. ತಪಾಸಣೆ ಮಾಡುವ ವೇಳೆ ಅಕ್ರಮ ಗುಂಡುಗಳು ಹಾಗೂ ಕಾಟ್ರಿಡ್ಜ್ ಪತ್ತೆಯಾಗಿವೆ.

ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುವ ಸಂದರ್ಭದಲ್ಲಿ ಆರೋಪಿ ಬಳಿ 22 ನಂಬರ್‍ ನ ಎರಡು ಖಾಲಿ ಕಾಟ್ರಿಡ್ಜ್ ಹಾಗೂ 5.56 ನಂಬರ್‍ ನ ಒಂದು ಹೆಡ್ ಪಾರ್ಟ್ ಪತ್ತೆಯಾಗಿವೆ. ಆದರೆ ವಿಚಾರಣೆಯ ವೇಳೆ ಬೇರೆ ಯಾವುದೇ ರೀತಿಯ ದಾಖಲಾತಿಗಳು ದೊರಕಲಿಲ್ಲ. ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.




ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ