‘ಸಿಎಂಗೆ ಜ್ಞಾನವಿಲ್ಲ’-ಹೆಚ್ಡಿಕೆ

Kannada News

09-11-2017

ಶಿವಮೊಗ್ಗ: ಕಾಂಗ್ರೆಸ್ ನಾಯಕರು ಸರ್ಕಾರದ ಹಣವನ್ನ ಲೂಟಿ ಮಾಡಿ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ ಎಂದು, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಶಿವಮೊಗ್ಗದ ಬುಳ್ಳಾಪುರದಲ್ಲಿಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದ ರೈತರು ಸಂಕಷ್ಟದಲ್ಲಿದ್ದು, ರೈತರ ಜೊತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚೆಲ್ಲಾಟವಾಡುತ್ತಿವೆ. ಮೆಕ್ಕೆಜೋಳಕ್ಕೆ ಹಾನಿಯುಂಟಾಗಿದ್ದು, ರೈತರು ಕಂಗಾಲಾಗಿದ್ದಾರೆ ಆದರೇ ಸರ್ಕಾರ ರೈತರ ಬೆಂಬಲಕ್ಕೆ ಬಂದಿಲ್ಲ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿದೆ ಅಷ್ಟೆ. ಸಾಲದ ಹಣ ಪಾವತಿಸಲು ಸರ್ಕಾರದಲ್ಲಿ ಹಣವಿಲ್ಲ. ಮುಂದಿನ ಸರ್ಕಾರಕ್ಕೆ ಸಾಲದ ಹೊರೆ ಹೊರಿಸಲು ಸಾಲಮನ್ನಾ ಮಾಡಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಸರ್ಕಾರ ಐಟಿ ಮತ್ತು ಇಡಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದರೇ ,ರಾಜ್ಯ ಸರ್ಕಾರ ಸಿಐಡಿ ಮತ್ತು ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಸಿದ್ದರಾಮಯ್ಯರ 4 ವರ್ಷದ ಸಾಧನೆ ಕೇವಲ ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದು ಅಷ್ಟೆ, ಸಿಎಂಗೆ ಜ್ಞಾನವಿಲ್ಲ ಎಂದು ವಾಗ್ದಾಳಿ ನಡೆಸಿದರು. ಎಲ್ಲಾ ಗ್ರಾಮಗಳ ಕಷ್ಟ ಅರಿಯಲು ನಾವು ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಗಾಂಧೀಜಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ನಾನು ಗ್ರಾಮವಾಸ್ತವ್ಯ ಮಾಡಿದ ಗ್ರಾಮಗಳು ಅಭಿವೃದ್ದಿಯಾಗಿವೆ. ರಾಜ್ಯದಲ್ಲಿ 24 ಗಂಟೆಗಳ ಕಾಲ ವಿದ್ಯುತ್ ನೀಡುತ್ತೇವೆ. ಅಧಿಕಾರಕ್ಕೆ ಬಂದ 2 ಗಂಟೆಗಳೊಳಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

 


ಸಂಬಂಧಿತ ಟ್ಯಾಗ್ಗಳು

Kannada News Karnataka ಮೆಕ್ಕೆಜೋಳ ಸಾಲಮನ್ನಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ