ಜೆಡಿಎಸ್ ಗೆ ಕಾಂಗ್ರೆಸ್ ಮುಖಂಡ ಎ.ಮಂಜುನಾಥ್..

Kannada News

09-11-2017

ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎ.ಮಂಜುನಾಥ್ ನಾಳೆ ಜೆಡಿಎಸ್‍ ಗೆ ಸೇರ್ಪಡೆಯಾಗಲಿದ್ದಾರೆ. ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಾಳೆ ಮಧ್ಯಾಹ್ನ ಸೇರ್ಪಡೆ ಕಾರ್ಯಕ್ರಮವಿದ್ದು, ಮಂಜುನಾಥ್ ಅವರೊಂದಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಕೆ.ಕೃಷ್ಣಮೂರ್ತಿ, ಮಾಗಡಿ ಪುರಸಭೆ, ಬಿಡದಿ ಪುರಸಭೆಯ ಕಾಂಗ್ರೆಸ್‍ ನ ಹಾಲಿ ಮತ್ತು ಮಾಜಿ ಸದಸ್ಯರು ಕೂಡ ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ. ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಕೂಡ ಮಂಜುನಾಥ್ ಅವರೊಂದಿಗೆ ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ನಾಳೆ ಮಧ್ಯಾಹ್ನ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾಗಡಿ ತಾಲ್ಲೂಕಿನ ಕುದೂರು ಜಿಲ್ಲಾ ಪಂಚಾಯಿತಿ ಸದಸ್ಯರಾದ ಎ.ಮಂಜುನಾಥ್ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಟಿಕೆಟ್ ನೀಡುವುದು ಬಹುತೇಕ ಖಾತರಿ ಎಂದೇ ಹೇಳಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

JDS A.Manjunath ವಿಧಾನಸಭೆ ರಾಜ್ಯಾಧ್ಯಕ್ಷ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ