ಒಂದೇ ಶಿಕ್ಷಣ, ಒಂದೇ ವೇತನಕ್ಕೆ ಆಗ್ರಹ

Kannada News

10-11-2017

ಬೆಂಗಳೂರು: ಶಿಕ್ಷಕರ ವೇತನ ತಾರತಮ್ಯವನ್ನು ನಿವಾರಿಸಲು ಒಂದು ದೇಶ, ಒಂದು ಶಿಕ್ಷಣ, ಒಂದು ವೇತನ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಶಿಕ್ಷಕ ಮಹಾ ಸಂಘ ಒತ್ತಾಯಿಸಿದೆ.

ದೇಶದ 20 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ, ಶಿಕ್ಷಕರಿಗೆ ನೀಡುತ್ತಿರುವ ವೇತನ ಶ್ರೇಣಿಯನ್ನೇ ಜಾರಿ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ಇನ್ನು ಜಾರಿಯಾಗಿಲ್ಲ, ಹಾಗಾಗಿ ಇಡೀ ದೇಶಕ್ಕೆ ಅನ್ವಯವಾಗುವಂತೆ ಒಂದೇ ಶಿಕ್ಷಣ, ಒಂದೇ ವೇತನ ವ್ಯವಸ್ಥೆಯನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಶಿಕ್ಷಕ ಮಹಾ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಅರುಣ್ ಶಹಾಪೂರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿಂದನಕೆರ ಆಗ್ರಹಿಸಿದ್ದಾರೆ.

ಅಖಿಲ ಭಾರತ ಶಿಕ್ಷಕ ಮಹಾಸಂಘ 22 ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ 38 ಶಿಕ್ಷಕ ಸಂಘಟನೆಗಳ ಒಕ್ಕೂಟವಾಗಿದೆ. ಅಮರಾವತಿಯಲ್ಲಿ ನಡೆದ ಸಂಘದ ಸಭೆಯಲ್ಲಿ ಒಂದೇ ದೇಶ, ಒಂದೇ ಶಿಕ್ಷಣ, ಒಂದೇ ವೇತನ ನಿರ್ಣಯವನ್ನು ಕೈಗೊಳ್ಳಲಾಗಿದೆ  ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

One Nation Central Government ತಾರತಮ್ಯ ವಿಧಾನಪರಿಷತ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ