ಕೆರೆಯಲ್ಲಿ ಮೂವರ ದುರ್ಮರಣ

Kannada News

10-11-2017

ಮೈಸೂರು: ಮೈಸೂರು ನಗರ ಹೊರವಲಯದ ಪರಶುನಾಯಕನ ಕೆರೆ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಕೆರೆಗೆ ಉರುಳಿಬಿದ್ದಿದ್ದು ಮೃತಪಟ್ಟಿದ್ದಾರೆ. ನಗರದ ಕೈಲಾಶಪುರಂ ನ ನಿವಾಸಿ ಗಣೇಶ್ (40)  ಎಂದು ಮೃತ ದುರ್ದೈವಿಯೊಬ್ಬರನ್ನು ಗುರುತಿಸಲಾಗಿದೆ. ಮತ್ತು ಇನ್ನಿಬ್ಬರ ಶವಕ್ಕಾಗಿ ಶೋಧ ನಡೆಸಿದ್ದಾರೆ.

ಉತ್ತನಹಳ್ಳಿ ರಸ್ತೆಯಲ್ಲಿರುವ ಪರಶುನಾಯಕನ ಕೆರೆ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಆಕಸ್ಮಿಕವಾಗಿ ಆಯತಪ್ಪಿ ಕೆರೆಗೆ ಉರುಳಿಬಿದ್ದಿದ್ದಾರೆ ಎನ್ನಲಾಗಿದೆ. ಕೆಆರ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಸುನಿಲ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ನುರಿತ ಈಜುಗಾರರು ಕೆರೆಯಿಂದ ಶವಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಇತ್ತೇಚೆಗೆ ಸುರಿದ ಮಳೆಯಿಂದ ಕೆರೆಯಲ್ಲಿ ನೀರು ತುಂಬಿದ್ದು, ಹಸಿರು ಬೆಳೆದು ಪಾಚಿಕಟ್ಟಿದೆ. ಕೆ.ಆರ್. ಠಾಣೆ ಎಸಿಪಿ ಧರ್ಮಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Mysuru Lake ಶವ ಆಯತಪ್ಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ