‘ಹೃದಯ ವೈಶಾಲ್ಯತೆ ಇಲ್ಲದವರಿಂದ ಗಾಂಧಿ ಕೊಲೆ’

Kannada News

10-11-2017

ಕೋಲಾರ: ಹೃದಯ ವೈಶಾಲ್ಯತೆ ಇಲ್ಲದವರು ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಸಚಿವರಾಗಿರುವ ರಮೇಶ್ ಕುಮಾರ್ ಹೇಳಿದ್ದಾರೆ. ಟಿಪ್ಪು ಜಯಂತಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ದಾರ್ಶನಿಕರ ಜಯಂತಿಯನ್ನು ಸರ್ಕಾರವೇ ಮಾಡುತ್ತಿದೆ. ಅದೇ ರೀತಿ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದೇವೆ, ಇದರ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು. ಯಾರೂ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಬಾರದು ಎಂದರು. ಮಹಾತ್ಮ ಗಾಂಧೀಜಿಯವರನ್ನು ಕೊಂದಿದ್ದು ಸಹ, ಹೃದಯ ವೈಶಾಲ್ಯತೆ ಇಲ್ಲದವರೇ ಎಂದು ಹೇಳಿದರು.

ಸಂಸದ ಪ್ರತಾಪ್ ಸಿಂಹ ಮತ್ತಿತರರು ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರುಗಳಿಗೆ ಹಿಟ್ಲರ್ ಮತ್ತು ನೆಹರೂ ಅವರ ಬಗ್ಗೆ ವ್ಯತ್ಯಾಸವೇ ತಿಳಿಯದವರು ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಇನ್ನು ಖಾಸಗಿ ಆಸ್ಪತ್ರೆಗಳ ವಿಧೇಯಕವು ನವೆಂಬರ್.14ರಂದು ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ ಎಂದು, ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

 


ಸಂಬಂಧಿತ ಟ್ಯಾಗ್ಗಳು

Ramesh Kumar Kolar ವೈಶಾಲ್ಯತೆ ಸೂಕ್ಷ್ಮತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ