ಲಾರಿ ಚಕ್ರಕ್ಕೆ ಸಿಲುಕಿದ ಯುವಕ !

Kannada News

10-11-2017

ಬೆಂಗಳೂರು: ನಂದಿನಿ ಲೇಔಟ್‍ ನ ಕಂಠೀರವ ಸ್ಟುಡಿಯೋ ಬಳಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಸ್ಕೂಟರ್‍ ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಶ್ರೀಗಂಧ ಕಾವಲುವಿನ ನಾಗರಾಜ್ (21)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಅವರು, ಬೆಳಿಗ್ಗೆ 6.15ರ ವೇಳೆ ಹೋಂಡಾ ಆಕ್ವಿವಾ ಸ್ಕೂಟರ್‍ ನಲ್ಲಿ ಗೊರಗುಂಟೆಪಾಳ್ಯ ಕಡೆಯಿಂದ ಕಂಠೀರವ ಸ್ಟುಡಿಯೋ ಕಡೆ ಹೋಗುತ್ತಿದ್ದರು. ಮಾರ್ಗಮಧ್ಯೆ ಡಾ.ರಾಜ್‍ಕುಮಾರ್ ಸಮಾಧಿ ಬಳಿ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗಮಂಗಲ ಮೂಲದ ನಾಗರಾಜ್ ಕೆಲ ದಿನಗಳಿಂದ ನಗರದಲ್ಲಿ ನೆಲೆಸಿದ್ದರು. ರಾಜಾಜಿನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಲಾರಿ ಚಾಲಕನನ್ನು ಬಂಧಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಖಾಸಗಿ ಕಂಪನಿ ದುರ್ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ