ಪೊಲೀಸರ ಬಲೆಗೆ ಕಳ್ಳ: 300 ಗ್ರಾಂ.ಚಿನ್ನ

Kannada News

10-11-2017

ಬೆಂಗಳೂರು: ಕುಖ್ಯಾತ ಕನ್ನಗಳ್ಳನನ್ನು ಬಂಧಿಸಿರುವ ಕೆಂಗೇರಿ ಪೊಲೀಸರು 11 ಪ್ರಕರಣಗಳನ್ನು ಪತ್ತೆ ಹಚ್ಚಿ 9 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೆಸರಘಟ್ಟದ ಹುರಳಿಚಿಕ್ಕನಹಳ್ಳಿಯ ಮಂಜೇಶ್ ಅಲಿಯಾಸ್ ಮಂಜ (34) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 9 ಲಕ್ಷ ಮೌಲ್ಯದ 300 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಬಂಧನದಿಂದ ಕೆಂಗೇರಿಯ ವಿವಿಧೆಡೆ ನಡೆದಿದ್ದ 2 ಕನ್ನಗಳವು, 6 ಮನೆಗಳವು, 2 ಗಮನ ಸೆಳೆದು ವಂಚನೆ ನಡೆಸಿದ್ದ 2 ಪ್ರಕರಣಗಳು ಸೇರಿ 11 ಪ್ರಕರಣಗಳು ಪತ್ತೆಯಾಗಿದೆ.

ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ಇದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಅಪರಾಧ ಕೃತ್ಯಗಳಲ್ಲಿ ತೊಡಗಿದ್ದನು. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಕೆಂಗೇರಿ ಪೊಲೀಸ್ ಇನ್ಸ್ ಪೆಕ್ಟರ್ ರಾಮಪ್ಪ ಗುತ್ತೇರ್ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಆರೋಪಿ ಖಚಿತ ಮಾಹಿತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ