ಗದ್ದಲದ ನಡುವೆ ಟಿಪ್ಪು ಜಯಂತಿ...

Kannada News

10-11-2017

ಮಡಿಕೇರಿ: ಟಿಪ್ಪು ಜಯಂತಿ ಆಚರಣೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಗದ್ದಲದ ನಡುವೆ ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಿತು. ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಅದನ್ನು ಉಲ್ಲಂಘಿಸಿ ಇಲ್ಲಿನ ಹಳೆ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರವಿಕುಶಾಲಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಡಿವೈಎಸ್‍ಪಿ ಸಂಪತ್‍ ಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು, ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದಾಗ ಅನಿವಾರ್ಯವಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.

ಇನ್ನು ನಗರದ ಕೋಟೆ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಮುಂದಾದ ಶಾಸಕ ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಹ್ಮಣಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದರು. ರಸ್ತೆಯಲ್ಲಿ ಜೈ ಶ್ರೀರಾಮ್ ನೃತ್ಯ ಮಾಡಿ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆ ಕಾರ್ಯಕರ್ತರನ್ನೂ ಪೊಲೀಸರು ವಶಕ್ಕೆ ಪಡೆದರು.

 

 

 


ಸಂಬಂಧಿತ ಟ್ಯಾಗ್ಗಳು

Madikeri Bjp ನಿಷೇಧಾಜ್ಞೆ ಮುತ್ತಿಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ