‘ಸಮಯಕ್ಕೆ ಬರದಿದ್ದರೆ ಶಿಸ್ತು ಕ್ರಮ’

Kannada News

10-11-2017

ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಗದಿತ ಸಮಯಕ್ಕೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿದ್ದರೆ, ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ತುರ್ತುಪರಿಸ್ಥಿತಿಗಳ ಸಂದರ್ಭದಲ್ಲಿ ವೈದ್ಯರು ಇಲ್ಲದೇ ಇರುವುದರ ಕುರಿತಂತೆ, ಇತ್ತೀಚೆಗೆ ದೂರುಗಳು ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ, ನಿನ್ನೆ ಸುತ್ತೋಲೆಯನ್ನು ಹೊರಡಿಸಿದೆ.

ಸುತ್ತೋಲೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಸಹಾಯಕ ಪ್ರಾಧ್ಯಾಪಕರನ್ನು ರಾತ್ರಿ ಪಾಳಿಯಲ್ಲಿಯೂ ನಿಯೋಜಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಅಗತ್ಯ ಸೌಲಭ್ಯಗಳ ಕೊರತೆಯುಂಟಾದರೆ ಕಾಲೇಜಿನ ನಿರ್ದೇಶಕರು ಮತ್ತು ಸೂಪರಿಂಡೆಂಟ್ ವೈದ್ಯಕೀಯ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದೆ.


ಸಂಬಂಧಿತ ಟ್ಯಾಗ್ಗಳು

government Doctors ಶಿಸ್ತು ಕ್ರಮ ವೈದ್ಯಕೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ