ವಿದೇಶದಿಂದಲೇ ಓಟು ಹಾಕಬಹುದು..!

Kannada News

11-11-2017

ಉದ್ಯೋಗ, ವ್ಯವಹಾರ, ವಿದ್ಯಾಭ್ಯಾಸ ಇತ್ಯಾದಿ ಬೇರೆ ಬೇರೆ ಕಾರಣಗಳಿಗಾಗಿ ಜಗತ್ತಿನ ಹಲವು ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಪ್ರಾಕ್ಸಿ ಓಟಿಂಗ್ ಅಂದರೆ ಅವರ ಪರವಾಗಿ ಬೇರೆಯವರು ಮತ ಹಾಕುವ ಹಕ್ಕು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸುಪ್ರೀಂ ಕೋರ್ಟಿಗೆ ತಿಳಿಸಿದ್ದಾರೆ.

ಈ ಸಂಬಂಧ ಪ್ರಜಾ ಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಕೇಂದ್ರದ ಈ ಕ್ರಮದಿಂದ ವಿಶ್ವದ ಹಲವೆಡೆ ನೆಲೆಸಿರುವ 25 ಲಕ್ಷಕ್ಕೂ ಹೆಚ್ಚು ಅನಿವಾಸಿ ಭಾರತೀಯರಿಗೆ, ತಮ್ಮ ಪ್ರತಿನಿಧಿಗಳ ಮೂಲಕ ಮತಚಲಾವಣೆ ಮಾಡುವ ಅವಕಾಶ ಸಿಗಲಿದೆ.

ತಮಗೂ ಕೂಡ ದೇಶದ ಚುನಾವಣೆಗಳಲ್ಲಿ ಮತದಾನದ ಅವಕಾಶ ಕಲ್ಪಿಸಲು ಸರ್ಕಾರವನ್ನು ನಿರ್ದೇಶಿಸುವಂತೆ, ಅನಿವಾಸಿ ಭಾರತೀಯರು ಮೂರು ವರ್ಷಗಳ ಹಿಂದೆಯೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ಕೇಂದ್ರ ಚುನಾವಣಾ ಆಯೋಗದವರೂ ಕೂಡ ಮೋದಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ