ಪೇದೆ ಮೇಲೆ ನಾಲ್ಕೈದು ಮಂದಿ ಹಲ್ಲೆ

Kannada News

11-11-2017

ಬೆಂಗಳೂರು: ಟಿಪ್ಪು ಜಯಂತಿ ಮುಗಿಸಿಕೊಂಡು ಬರುತ್ತಿದ್ದ ಪೇದೆಯ ಮೇಲೆ ಸುಮಾರು ನಾಲ್ಕೈದು ಮಂದಿ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಮುಂಭಾಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶಿವಾಜಿನಗರ ಪೊಲೀಸ್ ಪೇದೆ ಅಂಬರೀಶ್ ರಾಠೋಡ್ ಎಂಬವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಸುಮಾರು ನಾಲ್ಕು ಐದು ಮಂದಿ ಇದ್ದ ತಂಡ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಮುಂಭಾಗದಲ್ಲಿ ಟಿಪ್ಪು ಜಯಂತಿ ಆಚರಣೆ ಮುಗಿಸಿಕೊಂಡು ಬರುತ್ತಿದ್ದ ಪೇದೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಸದ್ಯ ಗಾಯಗೊಂಡಿರುವ ಪೇದೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಶಿವಾಜಿನಗರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

police constable shivaji nagar ಹಲ್ಲೆ ಪೊಲೀಸ್ ಪೇದೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ