ಕುತೂಹಲ ಮೂಡಿಸಿದ ಅಂಬರೀಷ್ ಭೇಟಿ..

Kannada News

11-11-2017

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಷ್, ನಿನ್ನೆ ರಾತ್ರಿ ಹಿರಿಯ ಹೋರಾಟಗಾರ ಹಾಗೂ ಮಾಜಿ ಸಂಸದ ಜಿ.ಮಾದೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮಂಡ್ಯದ ಹೊರವಲಯದಲ್ಲಿರುವ ಅಂಬರೀಷ್ ಅವರ ಆಪ್ತ, ಅಮರಾವತಿ ಚಂದ್ರಶೇಖರ್ ಅವರ ನಿವಾಸದಲ್ಲಿ ಜಿ.ಮಾದೇಗೌಡರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಇಬ್ಬರು ನಾಯಕರ ಈ ಭೇಟಿ ಜಿಲ್ಲಾ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಕೂಡ ಇಬ್ಬರು ನಾಯಕರು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ರಮ್ಯಾಗೆ ಮಂಡ್ಯ ಟಿಕೆಟ್ ಖಾತ್ರಿಯಾದ ಹಿನ್ನೆಲೆಯಲ್ಲಿ ಅಂಬರೀಷ್ ಕೊಂಚ ವಿಚಲಿತರಾಗಿದ್ದಾರೆ ಎಂದು ಹೇಳಲಾಗಿದೆ. ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ಸ್ವಂತ ಮನೆ ಮಾಡಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ರಮ್ಯಾ ಸ್ಪರ್ಧಿಸುತ್ತಾರೆ ಅನ್ನುವ ಸುದ್ದಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಾರಿ ಸಂಚಲನವನ್ನು ಉಂಟುಮಾಡಿದೆ.


ಸಂಬಂಧಿತ ಟ್ಯಾಗ್ಗಳು

Mandya Politics ಜಿ.ಮಾದೇಗೌಡ ಅಂಬರೀಷ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ