ಸುವರ್ಣ ಸೌಧಕ್ಕೆ ಮುತ್ತಿಗೆ..?

Kannada News

11-11-2017

ಹುಬ್ಬಳ್ಳಿ: ನ್ಯಾಯಮೂರ್ತಿ ಏ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡುವಂತೆ ಒತ್ತಾಯಿಸಿ ಹುಬ್ಬಳ್ಳಿ ನಗರದಿಂದ ಬೆಳಗಾವಿ ಸುವರ್ಣ ಸೌಧದವರಿಗೆ ಮಾದಿಗ ಯುವಸೇನೆ ಜಿಲ್ಲಾ ಘಟಕದ ಆಶ್ರಯದಲ್ಲಿ ಇದೇ ತಿಂಗಳ 13ರಂದು ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ರಾಜ್ಯಾಧ್ಯಕ್ಷ ಮುತ್ತು ಸುರಕೋಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಮುತ್ತು ಸುರಕೋಡ ಅವರು, ನವೆಂಬರ್13 ರಂದು ಚಳಿಗಾಲದ ಅಧಿವೇಶನದ ವೇಳೆ ಸುವರ್ಣ ಸೌಧವನ್ನು ಮುತ್ತಿಗೆ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಸುಮಾರು 1000 ಬೈಕ್ ಗಳುಳ್ಳ ರ‍್ಯಾಲಿ, ಅಂದು ಬೆಳಿಗ್ಗೆ 9.30ಕ್ಕೆ ನಗರದ ಕಿತ್ತೂರ ಚೆನ್ನಮ್ಮ ವೃತ್ತದಿಂದ ಹೊರಟು ನವನಗರ, ಧಾರವಾಡ, ಮುಮ್ಮಿಗಟ್ಟಿ, ಕಿತ್ತೂರು, ಎಂ.ಕೆ.ಹುಬ್ಬಳ್ಳಿ, ಹಿರೇಬಾಗೇವಾಡಿ ಮಾರ್ಗವಾಗಿ ಬೆಳಗಾವಿ ಸುವರ್ಣ ಸೌಧ ತಲುಪಲಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

Hubbali Bike Rally ಸುವರ್ಣ ಸೌಧ ಸದಾಶಿವ ಆಯೋಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ