25 ಸಾವಿರ ವೈದ್ಯರು ಬೆಳಗಾವಿ ಚಲೋ..

Kannada News

11-11-2017

ಚಿತ್ರದುರ್ಗ: ವೈದ್ಯಕೀಯ ತಿದ್ದುಪಡಿ ಕಾಯ್ದೆ ವಿರೋಧಿಸಿ 25 ಸಾವಿರಕ್ಕೂ ಹೆಚ್ಚು ವೈದ್ಯರು ಬೆಳಗಾವಿ ಚಲೋದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಐಎಂಎನ ರಾಜ್ಯಾಧ್ಯಕ್ಷ ಡಾ.ರವೀಂದ್ರ ಹೇಳಿದ್ದಾರೆ. ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವೈದ್ಯಕೀಯ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಈ ಹೋರಾಟ ನಡೆಸಲಾಗುತ್ತಿದೆ ಎಂದರು. ಸದನದಲ್ಲಿ ಚರ್ಚಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. 13ರಂದು ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಮರು ದಿನದಿಂದಲೇ ಅನಿರ್ದಿಷ್ಟಾವಧಿ ಸರದಿ ಉಪವಾಸ ಸತ್ಯಾಗ್ರಹವನ್ನು ಕೂಡ ಮಾಡುವುದಾಗಿ ಡಾ.ರವೀಂದ್ರ ತಿಳಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Medical association Chitradurga ವೈದ್ಯಕೀಯ ಹೋರಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ