‘ಪ್ರತಿಭಟನೆ ಪ್ರತಿಯೊಬ್ಬರ ಹಕ್ಕು’

Kannada News

13-11-2017 164

ಬೆಳಗಾವಿ: ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದು, ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಆರೋಗ್ಯ ಸಚಿವ ರಮೇಶ್‍ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಬೇಡ ಎನ್ನುವುದು ಖಾಸಗಿ ವೈದ್ಯರ ಅಭಿಪ್ರಾಯವಾಗಿದೆ. ಆದರೆ, ಈ ವಿಧೇಯಕ ಜಂಟಿ ಸದನ ಸಮಿತಿ ಪರಿಶೀಲಿಸಿ ಆ ಸಮಿತಿ ಸರ್ಕಾರದ ಮುಂದೆ ವರದಿ ಮಂಡಿಸುತ್ತದೆ. ಆ ಸಮಿತಿಯ ವರದಿಯಂತೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳುತ್ತದೆ. ಇದು ನಮ್ಮ ಒಬ್ಬರ ನಿರ್ಧಾರವಲ್ಲ ಎಂದು ರಮೇಶ್‍ಕುಮಾರ್ ತಿಳಿಸಿದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ