'ಕಠಿಣ ಶಿಕ್ಷೆ ಕೊಡಿಸದೆ ಬಿಡುವುದಿಲ್ಲ'

Kannada News

13-11-2017

ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ಕೊಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಸಂತಾಪ ಸೂಚಕ ನಿರ್ಣಯದ ಮೇಲೆ ಮಾತನಾಡಿದ ಅವರು, ಗೌರಿಲಂಕೇಶ್ ಸಾವು ಸಮಾಜಕ್ಕೆ ಆದ ನಷ್ಟ ಎಂದರು. ನೇರ, ನಿಷ್ಟೂರವಾದಿಯಾಗಿದ್ದ ಗೌರಿ ಅವರು, ಸಾಮಾಜಿಕ ಹೋರಾಟದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಅವರ ಹತ್ಯೆ ಸಮಾಜವನ್ನು ಭಯಬೀಳಿಸುವ ಪ್ರಯತ್ನದ ಭಾಗವಾಗಿದೆ, ಇದನ್ನು ಸರ್ಕಾರ ಸಹಿಸುವುದಿಲ್ಲ, ನ್ಯಾಯಕ್ಕಾಗಿ ಹೋರಾಟ ಮಾಡುವವರನ್ನು ಹತ್ಯೆ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಹತ್ಯೆಮಾಡಿದ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತನಿಖಾ ದಳ(ಎಸ್‍ಐಟಿ) ರಚನೆ ಮಾಡಲಾಗಿದೆ. ಈವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಆದರೆ, ನಮ್ಮ ಸರ್ಕಾರ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ಕೊಡಿಸದೆ ಬಿಡುವುದಿಲ್ಲ ಎಂದು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ