ಮಹದಾಯಿ ವಿವಾದ:’ಪ್ರಧಾನಿ ಮಧ್ಯಸ್ಥಿಕೆ ಬೇಕು’

Kannada News

13-11-2017 226

ಬೆಳಗಾವಿ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ. ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಸಾಂಬಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮಹದಾಯಿ ವಿವಾದ ಸಂಬಂಧ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹರಿಸಬೇಕು. ಮಧ್ಯಸ್ಥಿಕೆ ವಹಿಸುವಂತೆ ನಾನು ಈಗಾಗಲೇ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಗೋವಾ, ಮಹಾರಾಷ್ಟ್ರ ಸರ್ಕಾರದವರ ಜೊತೆ ಮಾತುಕತೆ ನಡೆಸಲು ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದೇನೆ, ಯಾವುದಕ್ಕೂ ಪ್ರತಿಕ್ರಿಯೆ ನೀಡಿಲ್ಲ. ಅವರು ಕರೆಯದೆಯೇ ನಾನು ಹೋಗಲು ಆಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ನಾನು ಹೋಗಿ ಬಾಗಿಲಲ್ಲಿ ನಿಂತು ಬರಲೇ ಎಂದು ರೇಗಿದರು. ಪ್ರಧಾನಿಯವರು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬಹುದು. ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ಅದನ್ನು ಅವರು ಮಾಡಲಿ ಎಂದು ತಿಳಿಸಿದರು.

ಬಿಎಸ್‍ವೈ ಅವರು ತಮ್ಮ ಸರ್ಕಾರದ ಮೇಲೆ ಆರೋಪಗಳ ಬಗ್ಗೆ ದಾಖಲೆ ಬಿಡುಗಡೆ ಮಾಡಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ಅವರ ಮೇಲಿನ ಕೇಸ್‍ಗಳಿಂದ ಹೊರಬರಲಿ ಎಂದರು. ಸಚಿವ ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ಪಕ್ಷದವರ ಮುಖಂಡರ ಮೇಲೆ ಸಾಕಷ್ಟು ದೂರುಗಳಿವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರು, ನಮ್ಮಲ್ಲಿರುವ ಹಲವು ಮುಖಂಡರು ಸೇರಿದಂತೆ 24 ಮಂತ್ರಿಗಳ ಮೇಲೆ ಎಫ್‍ಐಆರ್ ಗಳು ದಾಖಲಾಗಿವೆ. ಮೊದಲು ಅವರ ರಾಜೀನಾಮೆ ಕೊಡಿಸಿ ನಂತರ ಜಾರ್ಜ್ ರಾಜೀನಾಮೆ ಕೇಳಲಿ ಎಂದು ಹೇಳಿದರು.ಸಂಬಂಧಿತ ಟ್ಯಾಗ್ಗಳು

Mahadayi Goa, Maharashtra ಮಹದಾಯಿ ವಿವಾದ ಸಾಂಬಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ