ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

Kannada News

14-11-2017

ಬೆಂಗಳೂರು: ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ಕಲ್ಲುಗಳಿಂದ ದೇಹಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಹತ್ಯೆ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕಾಗಮಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು, ಪರಿಶೀಲನೆ ನಡೆಸಿ, ಮೃತ ಹೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Layout Murder ಬರ್ಬರ ಹತ್ಯೆ ಮಾರಕಾಸ್ತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ