ಚಿಕಿತ್ಸೆಗಾಗಿ ಗರ್ಭಿಣಿಯರ ಪರದಾಟ...

Kannada News

14-11-2017

ವಿಜಯಪುರ: ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದ ಹಿನ್ನೆಲೆ, ರಾಜ್ಯಾದ್ಯಂತ ಹೊರ ರೋಗಿಗಳಿಗೆ ಚಿಕಿತ್ಸೆ ದೊರೆಯದೆ ಪರದಾಡುವಂತಾಗಿದೆ, ಜಿಲ್ಲಾಸ್ಪತ್ರೆಗಳಲ್ಲಿ ಬಡ ಗರ್ಭಿಣಿಯರ ಪರದಾಟ ಹೇಳತೀರದಾಗಿದೆ. ವಿಜಯಪುರದದಲ್ಲಿ ಬಡ ಗರ್ಭಿಣಿಯರು ಚಿಕಿತ್ಸೆ ಮತ್ತು ಇನ್ನಿತರ ಸೌಲಭ್ಯಗಳಿಲ್ಲದೆ ತೊಂದೆರೆಗೊಳಗಾಗಿದ್ದಾರೆ. ಖಾಸಗಿ ವೈದ್ಯರ ಮುಷ್ಕರದಿಂದ ಜಿಲ್ಲಾ ಆಸ್ಪತ್ರೆಗೆ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದು, ಆಸ್ಪತ್ರೆಯ ಮುಂದೆ ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ.

ಇನ್ನು ಬಾಗಲಕೋಟೆಯಲ್ಲಿಯೂ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಒಳರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾದ್ಯಂತ ಕ್ಲಿನಿಕ್, ನರ್ಸಿಂಗ್ ಹೋಮ್ ಸೇರಿ 600 ಖಾಸಗಿ ಆಸ್ಪತ್ರೆ ಬಂದ್ ಆಗಿವೆ ಎಂದು ತಿಳಿದು ಬಂದಿದೆ. ರೋಗಿಗಳಿಲ್ಲದೆ ಬಹುತೇಕ ಖಾಸಗಿ ಆಸ್ಪತ್ರೆಗಳು ಬಿಕೊ ಎನ್ನುತ್ತಿವೆ. ಇನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗಳ ಕಡೆ ರೋಗಿಗಳ ಪ್ರಯಾಣ ಬೆಳೆಸಿದ್ದಾರೆ.

ಇದಲ್ಲದೇ ಗದಗ್ ನಲ್ಲಿ ಖಾಸಗಿ ವೈದ್ಯರ ಮುಷ್ಕರದ ಎರಡನೇ ದಿನವಾದ ಇಂದು, ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ಆಸ್ಪತ್ರೆಗಳನ್ನು ಬಂದ್ ಮಾಡಿ ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಭಾಗಿಯಾಗಲು ವೈದ್ಯರ ತೆರಳಿದ್ದಾರೆ. ಇದರಿಂದ ರೋಗಿಗಳ ಪರದಾಟ ಮುಂದುವರೆದಿದೆ. ಗದಗ ಜಿಲ್ಲೆಯ ಮುಂಡರಗಿ, ಶಿರಹಟ್ಟಿ, ರೋಣ, ನರಗುಂದ ತಾಲ್ಲೂಕುಗಳ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಸುಮಾರು 400ಕ್ಕೂ ಹೆಚ್ಚು ಖಾಸಗಿ ವೈದ್ಯರು ಬೆಳಗಾವಿ ಚಲೋಗೆ ತೆರಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ