ಬಸ್ ಕಂಡಕ್ಟರ್ ನಿರ್ಲಕ್ಷ್ಯ: ಮಹಿಳೆ ಸಾವು

Kannada News

14-11-2017 193

ಮೈಸೂರು: ಬಸ್ಸಿನ ಬಾಗಿಲು ಸರಿಯಾಗಿ ಮುಚ್ಚದ ಪರಿಣಾಮ, ಮಹಿಳಾ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯ ತಗಡೂರು ಬಳಿ ಖಾಸಗಿ ಬಸ್ ನಲ್ಲಿ ದುರ್ಘಟನೆ ಸಂಭವಿಸಿದೆ. ಮೈಸೂರು ‌ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸೋಮಸುಂದರಮ್ಮ(40) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ತನ್ನ ತಾಯಿಯನ್ನು ನೋಡಲು ಖಾಸಗಿ ಬಸ್ ನಲ್ಲಿ ಪ್ರಯಾಣದ ವೇಳೆ ನೂಕು‌ನುಗ್ಗಲಿನಿಂದ ಮಹಿಳೆ ಕೆಳಕ್ಕೆ ಬಿದ್ದಿದ್ದಾರೆ. ಬಸ್ ನಿಂದ ಕೆಳಗೆ ಬಿದ್ದ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ‌ ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ, ಬಸ್ ವಶಕ್ಕೆ ಪಡೆದ ಕವಲಂದೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಹಿಳೆಯ ಸಂಬಧಿಕರು ರಸ್ತೆಯಲ್ಲಿ ಶವವಿಟ್ಟು ಪರಿಹಾರ ನೀಡುವಂತೆ ಪ್ರತಿಭಟನೆ ನಡೆಸಿದ್ದಾರೆ. ಒಟ್ಟಾರೆ ಕಂಡಕ್ಟರ್, ಚಾಲಕನ‌ ನಿರ್ಲಕ್ಷ್ಯಕ್ಕೆ ಅಮಾಯಕ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Mysore Bus accident ನಂಜನಗೂಡು ಪರಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ