‘ಸದ್ಯದಲ್ಲೇ ಡಿಕೆಶಿ ರಾಜೀನಾಮೆ’- ಬಿಎಸ್ ವೈ

Kannada News

14-11-2017

ಕಾರವಾರ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸದ್ಯದಲ್ಲಿಯೇ ರಾಜೀನಾಮೆ ಕೊಡುವ ಪರಿಸ್ಥಿತಿ ಬರಲಿದೆ ಎಂದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರಡೇಶ್ವರದಲ್ಲಿ ಮಾತನಾಡಿ ಅವರು, ಈಗಾಗಲೇ ಇಂಧನ ಸಚಿವ ಡಿ.ಕೆ ಶಿವಕುಮಾರ್ ಮೇಲೆ ಐಟಿ ದಾಳಿ ಆಗಿದೆ, ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಖಚಿತವಾಗಿದೆ ಎಂದಿದ್ದು, ಅವರ ಕುಟುಂಬ ಸದಸ್ಯರನ್ನು ಸಹ ವಿಚಾರಣೆ ಮಾಡಲಾಗಿದೆ ಎಂದರು. ಈ ಕುರಿತಂತೆ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದವರು ಡಿ.ಕೆ.ಶಿವಕುಮಾರ್ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ, ಆಗ ಡಿ.ಕೆ.ಶಿವಕುಮಾರ್ ಅನಿವಾರ್ಯವಾಗಿ ರಾಜೀನಾಮೆ ನೀಡಲೇ ಬೇಕು ಎಂದು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ