ಕಳ್ಳನಿಗೆ ಸಾರ್ವಜನಿಕರಿಂದ ಗೂಸ..!

Kannada News

15-11-2017

ಬೆಂಗಳೂರು: ಸಾರ್ವಜನಿಕರನ್ನು ಬೆದರಿಸಿ ರಾಬರಿ ಮಾಡುತ್ತಿದ್ದ ಮೂವರು ಕಳ್ಳರಲ್ಲಿ ಒಬ್ಬನು ಸಿಕ್ಕಿಬಿದ್ದಿದ್ದು, ಸಾರ್ವಜನಿಕರೇ ಹಿಗ್ಗಾಮುಗ್ಗ ಥಳಿಸಿದ್ದಾರೆ. ಘಟನೆಯು ನಗರದ ಜಯನಗರ ಪೊಲೀಸ್ ಠಾಣೆ ಹಿಂಭಾಗದ ರಸ್ತೆಯಲ್ಲಿ ನಡೆದಿದೆ. ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು, ಮೂವರು ಸಾರ್ವಜನಿಕರನ್ನು ಬೆದರಿಸಿ ಮೊಬೈಲ್ ಪರ್ಸ್ ಕದಿಯಲು ಯತ್ನಿಸಿದ್ದರು, ಈ ವೇಳೆ ಒಬ್ಬನನ್ನು ಹಿಡಿದು ಥಳಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ನಂತರದಲ್ಲಿ ಜಯನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಜಯನಗರ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bengaluru Robbery ಪೊಲೀಸ್ ವಿಚಾರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ