ಕಸಾಪ ವಿರುದ್ಧ ನಂಜರಾಜ ಅರಸು ಆಕ್ರೋಶ !

Kannada News

15-11-2017

ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥವನ್ನು ಮಾತ್ರ ನಕಲು ಮಾಡಿಲ್ಲ, ಇಡೀ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಕಲು ಮಾಡಲಾಗುತ್ತಿದೆ ಎಂದು, ಹಿರಿಯ ಇತಿಹಾಸ ತಜ್ಞ ಪ್ರೊ.ನಂಜರಾಜ ಅರಸ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಕನ್ನಡ ವೇದಿಕೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕನ್ನಡ ರಥ ನಕಲು ಮಾಡಿದ ಕಸಾಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕಾಡಾ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ, ಇತಿಹಾಸ ತಜ್ಞ ಪ್ರೊ.ನಂಜರಾಜ ಅರಸು ಸೇರಿ ಹಲವರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ನಂಜರಾಜ ಅರಸು ಅವರು, ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಗಮನ ಹರಿಸುತ್ತಿಲ್ಲ, ಸಾಹಿತ್ಯ ಸಮ್ಮೇಳನದ ನೆಪದಲ್ಲಿ ನಡೆದಿರುವ ಅಕ್ರಮ ಹಾಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಕಳೆದ 15 ವರ್ಷಗಳಿಂದ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದರು.

ನಾನು ಯಾವುದೇ ಕಾರಣಕ್ಕೂ ಸಾಹಿತ್ಯ ಸಮ್ಮೇಳನದಲ್ಲಿ ಆಶಯ ಭಾಷಣ ಮಾಡಲ್ಲ, ಸಾಹಿತ್ಯ ಸಮ್ಮೇಳನ ವಿರೋಧ ಮಾಡ್ತೀನಿ ಎಂದು ಆಕ್ರೋಶ ಭರಿತರಾಗಿ ನುಡಿದರು. ಭ್ರಷ್ಟಾಚಾರದ ಕೇಂದ್ರ ಬಿಂದು ಕನ್ನಡ ಸಾಹಿತ್ಯ ಸಮ್ಮೇಳನ ಬೇಡ ಎಂದಿರುವ ಅವರು, ಕಸಾಪದಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಲು ಮನು ಬಳಿಗಾರ್ ನಿರಾಸಕ್ತಿ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಮ್ಮೇಳನದಲ್ಲಿ ಆಶಯ ಭಾಷಣ ಮಾಡಲ್ಲ ಎಂದು, ಮನು ಬಳಿಗಾರ್ ಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ