ಬೆಂಕಿ ತಗುಲಿ ಮೂವರ ಸಾವು

Kannada News

15-11-2017

ಬೆಂಗಳೂರು: ನಗರದ ಹೊರವಲಯದ ಹೆಬ್ಬಗೋಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ತಗುಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಮೃತಪಟ್ಟು ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ತಿರುಪಾಳ್ಯದ ವಿಕಾಸ್ ಪ್ರದಾನ್(27)ಅವರ ಪತ್ನಿ ಕರ್ಣಾ(24) ಸಂಬಂಧಿಕರಾದ ದೇವನ್(23) ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಸುಟ್ಟ ಗಾಯಗಳಾಗಿರುವ ಚವನ್ ಅಧಿಕಾರಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಸ್ಸಾಂ ಮೂಲದವರಾಗಿರುವ ಈ ನಾಲ್ವರು ಉದ್ಯೋಗ ಅರಸಿ ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದು ತಿರುಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಸೆಕ್ಯೂರಿಟಿ ಗಾರ್ಡ್ ಕೆಲಸ ಹುಡುಕುತ್ತಿದ್ದರು ಕಳೆದ ಶುಕ್ರವಾರ(ನ.10)ಮುಂಜಾನೆ ಕರ್ಣಾ ಅವರು ಅಡುಗೆ ಮಾಡಲು ಹೋದಾಗ ಸಿಲಿಂಡರ್ ಸೋರಿಕೆಯಿಂದ ಬೆಂಕಿ ತಗುಲಿ ವಿಕಾಸ್ ಪ್ರದಾನ್, ದೇವನ್ ಹಾಗೂ ಚವನ್ ಅಧಿಕಾರಿಗೆ ಬೆಂಕಿ ತಗುಲಿ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಕಿತ್ಸೆ ಫಲಕಾರಿಯಾಗದೇ ವಿಕಾಸ್ ಪ್ರದಾನ್,ಕರ್ಣಾ ಹಾಗೂ ದೇವನ್ ಮೃತಪಟ್ಟಿದ್ದಾರೆ.

ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದ್ದು ವಿಕಾಸ್ ಪ್ರದಾನ್ ಸಂಬಂಧಿಕರಿಗೆ ಮೃತದೇಹಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಲು ಹಣವಿಲ್ಲದ ಕಾರಣ ಮೈಸೂರು ರಸ್ತೆಯಲ್ಲಿರುವ ಶವಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು ಎಂದು ಹೆಬ್ಬಗೋಡಿ ಪೊಲೀಸರು ತಿಳಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ