ಬೈಕ್ ಕಳ್ಳನಿಂದ 14 ಬೈಕ್ ಜಪ್ತಿ

Kannada News

15-11-2017

ಬೆಂಗಳೂರು: ಮನೆಯ ಮುಂದೆ ನಿಲ್ಲಿಸಿದ್ದ ದುಬಾರಿ ಬೆಲೆಯ ಕೆಟಿಎಂ, ಬುಲೆಟ್ ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳನನ್ನು ಆಡುಗೋಡಿ ಪೊಲೀಸರು ಬಂಧಿಸಿ 14 ಲಕ್ಷ ಮೌಲ್ಯದ ಬೈಕ್‍ ಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಸೇಲಂ ಜಿಲ್ಲೆಯ ಅರ್ಜುನ್(27) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ 14 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿ ಅರ್ಜುನ್ ಬಸ್‍ ನಲ್ಲಿ ನಗರಕ್ಕೆ ಬಂದು, ಮಧ್ಯರಾತ್ರಿ ಸಂಚರಿಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳ ಹ್ಯಾಂಡಲ್ ಮುರಿದು ಕಳವು ಮಾಡುತ್ತಿದ್ದ. ಕದ್ದ ಬೈಕ್ ಗಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಎಂದು ಡಿಸಿಪಿ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.

ಆರೋಪಿ ಬಂಧನದಿಂದ ಆಡುಗೋಡಿ, ವಿವೇಕ ನಗರ, ಪರಪ್ಪನ ಅಗ್ರಹಾರದ 14 ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ದುಬಾರಿ ಬೆಲೆಯ ಮೂರು ಎನ್ ಫೀಲ್ಡ್ ಬೈಕ್ ಗಳನ್ನು ಕೂಡ ಕಳವು ಮಾಡಿದ್ದು, ಈತನ ವಿರುದ್ಧ ತಮಿಳುನಾಡಿನಲ್ಲಿ ಕಳವು, ಡಕಾಯತಿ, ಮನೆಗಳವು ಪ್ರಕರಣಗಳಿವೆ. ಮತ್ತೆ-ಮತ್ತೆ ಕಳವು ಕೃತ್ಯ ಮುಂದುವರಿಸುತ್ತಿದ್ದರಿಂದ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಆರೋಪಿ ನಗರಕ್ಕೆ ಬಂದು ಕಳವು ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bike stealing Case ಆರೋಪಿ ಡಿಸಿಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ