ಹುಬ್ಬಳ್ಳಿಯಲ್ಲಿ ಜೆಡಿಎಸ್ ಕಾರ್ಯತಂತ್ರ

Kannada News

15-11-2017

ಬೆಂಗಳೂರು: ಹುಬ್ಬಳ್ಳಿಯಲ್ಲಿ ಜೆಡಿಎಸ್ ರಾಜ್ಯ ಕಾರ್ಯಕಾರಿಣಿ ಸಭೆ ಹಮ್ಮಿಕೊಂಡಿದ್ದು, ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ಹೆಣೆಯಲು ಮುಂದಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಣಿಯಲ್ಲಿ ಜೆಡಿಎಸ್ ನ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಕಾರ್ಯಕಾರಿಣಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಮುಖಂಡರು ಭಾಗವಹಿಸಲಿದ್ದಾರೆ.

ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ  ಹೋರಾಟ, ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ, ವಿಕಾಸವಾಹಿನಿ ಯಾತ್ರೆಯ ರೂಪುರೇಷೆ, ರಾಜ್ಯದ ವಿವಿಧೆಡೆ ಸಮಾವೇಶಗಳನ್ನು ನಡೆಸುವುದು, ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಬಗೆಹರಿಸುವುದು, ವಿವಿಧ ಮುಖಂಡರ ಪಕ್ಷ ಸೇರ್ಪಡೆ, ಜನತಾ ಪರಿವಾರದ ನಾಯಕರ ಒಗ್ಗೂಡಿಸುವಿಕೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಕಾರ್ಯಕಾರಣಿಯಲ್ಲಿ ಚರ್ಚೆಗೆ ಬರಲಿವೆ ಎನ್ನಲಾಗಿದೆ.

ರಾಷ್ಟ್ರೀಯ ಪಕ್ಷಗಳ ಜನ ವಿರೋಧಿ ನೀತಿಯಿಂದ ರಾಜ್ಯದ ಜನ ಬೇಸತ್ತಿದ್ದು, ಪ್ರಾದೇಶಿಕ ಪಕ್ಷದತ್ತ ಒಲವು ತೋರಿದ್ದಾರೆ. ಈ ಪರಿಸ್ಥಿತಿಯ ಲಾಭ ಪಡೆಯುವ ಮೂಲಕ ನಾವು ಅಧಿಕಾರಕ್ಕೆ ಬರಬೇಕೆಂಬ ಇರಾದೆ ಜೆಡಿಎಸ್‍ ನದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಲವು ಕಾರ್ಯತಂತ್ರಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಜಾರಿಗೊಳಿಸುತ್ತಿದ್ದಾರೆ.

ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದ ವಿವಿಧೆಡೆ ಇವರ ಈ ಯೋಜನೆಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸದೊಂದಿಗೆ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ