ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ !

Tense situation in Belgavi

16-11-2017

ಬೆಳಗಾವಿ: ಬೆಳಗಾವಿ ನಗರದಲ್ಲಿ ಮತ್ತೆ ದೊಡ್ಡ ಪ್ರಮಾಣದ ಕಲ್ಲು ತೂರಾಟ ನಡೆದಿದೆ. ನಗರದ ಖಡಕಗಲ್ಲಿ, ಕೋತವಾಲಗಲ್ಲಿ, ಗಣಾಚಾರಿಗಲ್ಲಿ, ಭಡಖಲಗಲ್ಲಿ ಪ್ರದೇಶ ವ್ಯಾಪ್ತಿಯಲ್ಲಿ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಲ್ಲದೆ ವಾಹನಗಳಿಗೆ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದಾರೆ. ಅಲ್ಲದೆ ನಿಯಂತ್ರಿಸಲು ಬಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ ಅಶಾಂತಿ ಸೃಷ್ಠಿಸುವ ಪ್ರಯತ್ನ ರಾತ್ರಿ 9:30ರ ಸುಮಾರಿಗೆ ನಡೆದಿದೆ.

ಕೆಲ ದುಷ್ಕರ್ಮಿಗಳು ನಿನ್ನೆ ರಾತ್ರಿ, ಬೆಳಗಾವಿಯ ಖಡಕಗಲ್ಲಿಯಲ್ಲಿ, ಸುಮಾರು ಮೂವತ್ತರಿಂದ ನಲವತ್ತು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚುವ ಪ್ರಯತ್ನ ‌ನಡೆಸಿದ್ದಾರೆ‌. ಬಡಕಲ್ಲ ಗಲ್ಲಿ ತಿರುವಿನಲ್ಲಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಾರಣ ಏನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಅಧಿವೇಶನದ ಮೂರನೇ ದಿನ ಹಾಗೂ ಸರಕಾರದ ಆಡಳಿತ ಯಂತ್ರ ಬೆಳಗಾವಿಯಲ್ಲಿ ಇರುವಾಗಲೇ ಈ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ‌. ಈ ಘಟನೆಗೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ.

ಆದರೆ ಟಿಪ್ಪು ಸುಲ್ತಾನ್ ಜಯಂತಿಯ ವೈಷಮ್ಯ ಮತ್ತು ಅದರ ಅಸಮಾಧಾನಗಳು ಇದಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಧಿವೇಶನದ ಸಂಪೂರ್ಣದ ಸಿದ್ದತೆ ಮತ್ತು ಭದ್ರತೆಯ ನಡುವೆ ಇಂಥ ಘಟನೆಗಳು ಇದೇ ಪ್ರಥಮಬಾರಿಗೆ ನಡೆದಿದ್ದು, ಇದು ರಾಜಕೀಯ ಪ್ರೇರಿತ ಮತ್ತು ಉದ್ದೇಶಪೂರ್ವಕವಾಗಿ ಮಾಡಿಸಿದ ಗದ್ದಲ ಎನ್ನುವ ಮಾತುಗಳು ಚರ್ಚೆಯಲ್ಲಿವೆ.

ಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರು ಉದ್ದೇಶಪೂರ್ವಕವಾಗಿ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಮಾರ್ಕೆಟ್ ಪೊಲೀಸರ ಧಾವಿಸಿ ಭದ್ರತೆಯಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು ನಿಯಂತ್ರಣ ಕ್ಕೆ ಬಾರದ ಪರಸ್ಥಿತಿ ನಿರ್ಮಾಣವಾಗಿದ್ದು , ಈ ಕಲ್ಲೂ ತೂರಾಟ ಘಟನೆಯಲ್ಲಿ ಡಿಸಿಪಿ ಅಮರನಾಥ ರೆಡ್ಡಿ ಸೇರಿದಂತೆ ಮಾರ್ಕೆಟ್ ಪೊಲೀಸ್ ಶಂಕರ ಮಾರಿಹಾಳಗೆ ತೀವ್ರ ಗಾಯಗಳಾಗಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ