ಸರ್ಕಾರಿ ವೈದ್ಯರಿಗಿಲ್ಲ ರಜೆ..!

No holiday for government doctors

16-11-2017

ಗದಗ: ಖಾಸಗಿ ಆಸ್ಪತ್ರೆಗಳ ವೈದ್ಯರ ಹೋರಾಟ ಹಿನ್ನೆಲೆ, ಗದಗ್ ನಲ್ಲಿ, ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳತ್ತ ರೋಗಿಗಳು ಮುಖ ಮಾಡಿದ್ದಾರೆ. ಇನ್ನು ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸರ್ಕಾರಿ ಆಸ್ಪತ್ರೆ ವೈದ್ಯರ ರಜೆ ರದ್ದು ಮಾಡಿ ಆರೋಗ್ಯಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಡ್ಡಾಯವಾಗಿ ಸೇವೆ ಹಾಜರಾಗುವಂತೆ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಷ್ಕರದ ನಾಲ್ಕನೇ ದಿನವು ರೋಗಿಗಳ ಪರದಾಟ ಮುಂದುವರೆದಿದ್ದು, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗೆ ಕಡ್ಡಾಯವಾಗಿ ಹಗಲು ಮತ್ತು ರಾತ್ರಿ ಸೇವೆ ನೀಡಿಲು ಸೂಚಿಸಲಾಗಿದೆ.

ಗದಗ ಜಿಲ್ಲೆಯಲ್ಲಿ 4 ತಾಲ್ಲೂಕು ಆಸ್ಪತ್ರೆಗಳು, 39 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗು ಎರಡು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Hospital Gadag ಆದೇಶ  ಸರ್ಕಾರಿ ಆಸ್ಪತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ