ಮಕ್ಕಳನ್ನು ಕೊಂದ ಬಸ್..!

School bus accident 3 children died

16-11-2017

ರಾಮನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಶಾಲಾ ಮಕ್ಕಳು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲುಕಿನ ಮರಳುವಾಡಿ ಬಳಿ ನಡೆದಿದೆ. ಮರಳವಾಡಿಯ ಅನ್ನಪೂರ್ಣೇಶ್ವರಿ ಆಶ್ರಮದ ಶಾಲೆಗೆ ಸೇರಿದ ಬಸ್ ನಲ್ಲಿ, ಸುಮಾರು 8 ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಇದರಲ್ಲಿ ಒರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟರೇ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಮಕ್ಕಳನ್ನು ಅವರ ಮನೆಗಳಿಂದ ಅನ್ನಪೂರ್ಣೇಶ್ವರಿ ಆಶ್ರಮದ ಶಾಲೆಗೆ ಕರೆದೊಯ್ಯುವ ಸಂದರ್ಭದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಅಲ್ಲದೇ ಘಟನೆಯಲ್ಲಿ ಇನ್ನು ಮೂರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ, ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

KSRTC School Bus ರಾಮನಗರ ಮುಖಾಮುಖಿ ಡಿಕ್ಕಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ