ತಂದೆಯೇ ಮಗಳ ಆತ್ಮಹತ್ಯೆಗೆ ಕಾರಣ

Girl Attempt suicide

16-11-2017 381

ಮಂಡ್ಯ: ವಿದ್ಯಾರ್ಥಿನಿಯೊಬ್ಬರು ವಿದ್ಯಾರ್ಥಿ ನಿಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಘಟನೆ ಸಂಭವಿಸಿದೆ. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಸ್ಮಾ(17)ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದು ಬಂದಿದೆ.

ಕಳೆದ ಶನಿವಾರ ರಜೆ ಹಾಕಿ ಊರಿಗೆ ಹೋಗಿದ್ದ ಪ್ರಸ್ಮಾ, ಇಂದು ಬೆಳಿಗ್ಗೆ ವಿದ್ಯಾರ್ಥಿ ನಿಲಯಕ್ಕೆ ಬಂದು ವಿಷ ಸೇವಿಸಿ ಅಸ್ವಸ್ಥಗೊಂಡಿರುವುದರಿಂದ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಬಿಜಿ ನಗರದ ಎಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ಮಾ, ನಾಗಮಂಗಲ ತಾಲ್ಲೂಕಿನ ದಂಡಿಗನಹಳ್ಳಿ ಗ್ರಾಮದ ಹನುಮಂತೇಗೌಡ ಮತ್ತು ಲೇಟ್ ಲಕ್ಷ್ಮಮ್ಮ ಅವರ ಪುತ್ರಿ ಎಂದು ತಿಳಿದುಬಂದಿದೆ. ಮಲತಾಯಿಯ ಧೋರಣೆ ಮತ್ತು ತಂದೆಯ ನಿರ್ಲಕ್ಷ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿರುವುದಾಗಿ ಬಾಲಕಿಯ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಪ್ರಕರಣ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಸಂಬಂಧಿತ ಟ್ಯಾಗ್ಗಳು

Suicide Mandya ನಾಗಮಂಗಲ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ