ಬಿಎಂಟಿಸಿ: 11 ಲಕ್ಷ ದಂಡ ವಸೂಲಿ

BMTC: Collected 11 Lakh fine

16-11-2017

ಬೆಂಗಳೂರು: ಬಿಎಂಟಿಸಿ ಬಸ್‍ ಗಳಲ್ಲಿ ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರ ವಿರುದ್ಧ ಸಂಸ್ಥೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ದಾಖಲೆ ಪ್ರಮಾಣದ 11,84,330.ರೂಗಳ  ದಂಡ ವಸೂಲು ಮಾಡಿದ್ದಾರೆ.

ಟಿಕೆಟ್ ಪಡೆಯದೇ ಸಂಚರಿಸುವುದು ಮತ್ತು ಸಂಸ್ಧೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್ ತಿಂಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 24035 ಟ್ರಿಪ್‍ಗಳನ್ನು ತಪಾಸಣೆ ನಡೆಸಿ 7586 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದಾರೆ. ಇವರಿಂದ ಒಟ್ಟು 11,84,330 ರೂ. ದಂಡ ವಸೂಲು ಮಾಡಿ ಸಂಸ್ಧೆಯ ನಿರ್ವಾಹಕರುಗಳ ವಿರುದ್ಧ 3035 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 726 ಪುರುಷ ಪ್ರಯಾಣಿಕರಿಂದ ಒಟ್ಟು 72,600 ರೂ. ಗಳನ್ನು, ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Best work
  • Prakash
  • Ask
Super
  • Shiva patil
  • Farmer