ವೈದ್ಯರ ಮುಷ್ಕರ: ಸಿಎಂಗೆ ಹೆಚ್ಡಿಕೆ ಸಲಹೆ

Doctor

17-11-2017

ಬೆಂಗಳೂರು: ವೈದ್ಯರ ಸಮಸ್ಯೆಯನ್ನು ನಾಜೂಕಾಗಿ ಪರಿಹರಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರ ಸ್ವಾಮಿ ಸಲಹೆ ನೀಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ. ರಾಜ್ಯಾದ್ಯಂತ ರೋಗಿಗಳು ಮೃತಪಡುತ್ತಿದ್ದಾರೆ, ಇಂಥ ಸಂದರ್ಭದಲ್ಲಿ ಸಮಸ್ಯೆಯನ್ನು ಆದಷ್ಟು ಬೇಗ ಮಾತುಕತೆ ಮೂಲಕ ಬಗೆಹರಿಸಿ, ವಿಧೇಯಕದಲ್ಲಿ ಒಂದಷ್ಟು ಬದಲಾವಣೆ ಮಾಡಿ ಎಂದಿದ್ದಾರೆ. ವೈದ್ಯರು ಸ್ಥಳೀಯ ಪ್ರಾಧಿಕಾರದ ಮುಂದೆ ಹೋಗಿ ಕೈ ಕಟ್ಟಿ ನಿಲ್ಲುವಂತಾಗುವುದು ಸರಿಯಲ್ಲ, ಜನಸಾಮಾನ್ಯರಿಗೆ ಅನುಕೂಲವಾಗುವ ಅಂಶಗಳಿರಲಿ, ಆದರೆ ವೈದ್ಯರಿಗೆ ಮುಜುಗರ ಆಗುವಂತ ಅಂಶಗಳನ್ನು ಕೈ ಬಿಡುವುದು ಉತ್ತಮ ಎಂದು ಹೇಳಿದ್ದಾರೆ. ಆರೋಗ್ಯ ಸಚಿವರೊಂದಿಗೆ ಮಾತನಾಡಿ, ಇವತ್ತೇ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿ, ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಎಲ್ಲವೂ ಸರಿಯಾಗತ್ತೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ