ಅರ್ಚಕನ ಬರ್ಬರ ಕೊಲೆ

priest

18-11-2017

ಮೈಸೂರು: ದೇವಸ್ಥಾನದ ಅರ್ಚಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆಯು, ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಈ ದುರ್ಘಟನೆ ನಡೆದಿದೆ. ಬದನವಾಳು ಗ್ರಾಮದ, ಚಾಮುಂಡೇಶ್ವರಿ ದೇಗುಲದ ಅರ್ಚಕನನ್ನು ಹತ್ಯೆಗೈದ ದುಷ್ಕರ್ಮಿಗಳು, ಮೃತದೇಹವನ್ನು ಬೇಲಿಗೆ ಎಸೆದು ಪರಾರಿಯಾಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹತ್ಯೆಗೆ ವೈಯಕ್ತಿಕ ಕಾರಣಗಳಿರಬಹುದು ಎಂದು ಪೊಲೀಸರು ಶಂಕಿಸಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Priest Murder ನಂಜನಗೂಡು ಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ