ಅನಂತಕುಮಾರ್ ಹೆಗಡೆ ರಾಜೀನಾಮೆಗೆ ಒತ್ತಾಯ

Protest against Anant Kumar Hegde

18-11-2017

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯ ಮಿನಿ ವಿಧಾನಸೌಧದ ಎದುರು, ಯುವ ಕಾಂಗ್ರೆಸ್ ಕಾರ್ಯಕರ್ತರು ಅನಂತಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದರು. ಬಿಜೆಪಿಯ ಪರಿವರ್ತನಾ ರ‍್ಯಾಲಿಯಲ್ಲಿ ಸಿಎಂ ವಿರುದ್ಧ ಅಸಭ್ಯ ಹೇಳಿಕೆ ನೀಡಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಮುಖಾಂತರ, ಯುವ ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ