ಅಕ್ರಮ ಶಸ್ತ್ರಾಸ್ತ್ರಗಳ ಜಾಲ ಪತ್ತೆ

illegal weapons network Detected

18-11-2017

ಬೀದರ್: ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿರುವ ಅಕ್ರಮ ಶಸ್ತ್ರಾಸ್ತ್ರಗಳ ಜಾಲವನ್ನು ಬೇಧಿಸಿರುವ ಜಿಲ್ಲಾ ಪೊಲೀಸರು, ನಾಲ್ವರನ್ನು ಬಂಧಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಬೀದರ್ ಅಕ್ರಮ ಶಸ್ತ್ರಾಸ್ತ್ರಗಳು ಪೂರೈಕೆಯಾಗುತ್ತಿದ್ದ ಜಾಲವನ್ನು ಇಂದು ಬೇಧಿಸಿ, ಜಾಲದಲ್ಲಿದ್ದ ನಾಲ್ವರನ್ನು ಬಂಧಿಸಿ 3 ನಾಡ ಪಿಸ್ತೂಲು ಹಾಗೂ 8 ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಾಲ್ವರು ಬಂಧಿತರಲ್ಲಿ ಬೀದರ್ ನಿವಾಸಿಗಳಾದ ಬಾಲಾಜಿ, ಚಂದ್ರಕಾಂತ್, ಜಹೀರ್ ಹಾಗೂ ಉತ್ತರ ಪ್ರದೇಶದ ರುಸ್ತುಮ್ ಅವರನ್ನು ಬಂಧಿಸಿ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಮೈಲೂರು ಕ್ರಾಸ್ ಬಳಿಯಿರುವ ಚಂದ್ರಕಾಂತ್ ಅವರ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹಿಸಿಡಲಾಗಿದೆ ಎನ್ನುವ ಖಚಿತ ಮಾಹಿತಿಯನ್ನಾಧರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ದೇವರಾಜ್ ನೇತೃತ್ವದಲ್ಲಿ ಗಾಂಧಿಗಂಜ್ ಪೊಲೀಸರು ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.

ಬೀದರ್ ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳಲ್ಲಿ ಹಂತಕರ ಹಾವಳಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಹಂತಕರಿಗೆ ವಿವಿಧ ರಾಜ್ಯಗಳಿಂದ ಅಕ್ರಮ ಶಸ್ತ್ರಾಸ್ತ್ರಗಳು ಪೂರೈಕೆಯಾಗುತ್ತಿದೆ. ಈ ಬಗ್ಗೆ ಹಲವು ದಿನಗಳಿಂದ ಕಣ್ಣಿಟ್ಟಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಶಸ್ತ್ರಾಸ್ತ್ರಗಳನ್ನು ಯಾವ ಕಾರಣಕ್ಕಾಗಿ ಸಂಗ್ರಹಿಸಿಟ್ಟಿದ್ದರು ಎನ್ನುವುದು ಇನ್ನು ತಿಳಿದುಬಂದಿಲ್ಲ. ಬಂಧಿತರಿಂದ ಹೆಚ್ಚಿನ ವಿಚಾರಣೆ ಬಳಿಕ ಯಾವ ಕಾರಣಕ್ಕಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟಿದ್ದರು. ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವ ಸಂಗತಿ ಗೊತ್ತಾಗಲಿದೆ ಎಂದು ಗಾಂಧಿಗಂಜ್ ಪೊಲೀಸರು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ