ನಡುರಸ್ತೆಯಲ್ಲಿ ಉರುಳಿಬಿದ್ದ ಲಾರಿ..!

Heavy Lorry rolled on Road !

20-11-2017

ಬೆಂಗಳೂರು: ಕಲ್ಲುಚಪ್ಪಡಿಗಳನ್ನ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯಲ್ಲೇ ಉರುಳಿ ಬಿದ್ದು ಕಲ್ಲು ಚಪ್ಪಡಿಗಳಡಿ ಸಿಲುಕಿದ ವ್ಯಕ್ತಿಯೊಬ್ಬರು ಮೃತಪಟ್ಟರೆ, ಮತ್ತೊಬ್ಬರು ಗಾಯಗೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರದ ಮಂಚನಬಲೆ ಸೇತುವೆ ಬಳಿ ನಡೆದಿದೆ.

ಕುರ್ಲಹಳ್ಳಿ ಗ್ರಾಮದ ಅನಿಲ್ ಕುಮಾರ್ (35) ಮೃತಪಟ್ಟವರು, ಅಪಘಾತದಲ್ಲಿ ಗಾಯಗೊಂಡಿರುವ ಮತ್ತೋರ್ವ ವ್ಯಕ್ತಿಯನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಮಂಚನಬಲೆ ಸೇತುವೆ ಬಳಿ ಹೆದ್ದಾರಿಯಲ್ಲಿ ಎದುರಗಡೆಯಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಬಲಗಡೆ ಹೋಗುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲುಚಪ್ಪಡಿಗಳಿದ್ದ ಲಾರಿ ಪಲ್ಟಿಯಾಗಿದೆ. ಪರಿಣಾಮ ಲಾರಿಯ ಹಿಂಬದಿ ಚಪ್ಪಡಿ ಕಲ್ಲುಗಳ ಮೇಲೆ ಕುಳಿತಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇನ್ನೊರ್ವರು ಗಾಯಗೊಂಡಿದ್ದಾರೆ.

ಅಪಘಾತವಾದ ನಂತರ ಲಾರಿಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಚಿಕ್ಕಬಳ್ಳಾಪುರ ಸಂಚಾರ ಪೊಲೀಸರು, ಪರಿಹಾರ ಕಾರ್ಯ ಕೈಗೊಂಡು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ