ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು

A man died from a moving train

21-11-2017

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರೊಬ್ಬರು ಬಿದ್ದು ಸಾವನ್ನಪ್ಪಿರುವ ದಾರಣ ಘಟನೆಯು, ಚಿಕ್ಕಬಳ್ಳಾಪುರದ ಗೌರಿಬಿದನೂರು ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಹಿಂದೂಪುರ-ಬೆಂಗಳೂರು ಪ್ಯಾಸೇಜರ್ ಟ್ರೈನ್ ನಿಂದ ಬಿದ್ದ ಪ್ರಯಾಣಿಕ ತೀವ್ರ ಗಾಯಗಳೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕನ ಸಾವು ಖಂಡಿಸಿ ರೈಲು ತಡೆದ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿದುರ್ಗ ರೈಲ್ವೆ ಸ್ಟೇಷನ್ ಬಳಿ ಜಮಾಯುಸಿರುವ ಪ್ರಯಾಣಿಕರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಯಲಹಂಕ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ