ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ

Srilanka prime minister in kollur

21-11-2017

ಉಡುಪಿ: ಶ್ರೀಲಂಕ ಪ್ರಧಾನಿ ರನಿಲ್ ವಿಕ್ರಮ ಸಿಂಘೆ, ಕೊಲ್ಲೂರು ಮೂಕಾಂಬಿಕ ದರ್ಶನ ಪಡೆಯಲು ಮಂಗಳೂರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿನ ಅಂತರಾಷ್ಟ್ರೀಯ ಮಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮಂಗಳೂರಿನ ಹೋಟೆಲ್ ಒಂದರಲ್ಲಿ ತಂಗಿದ್ದಾರೆ. ವಿಶೇಷ ಹೆಲಿಕಾಪ್ಟರ್ ಮೂಲಕ ಇಂದು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಇನ್ನು ಶ್ರೀಲಂಕ ಪ್ರಧಾನಿ ಕೊಲ್ಲೂರಿಗೆ ಭೇಟಿ ಹಿನ್ನೆಲೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ನಿನ್ನೆಯಷ್ಟೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು, ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.


ಸಂಬಂಧಿತ ಟ್ಯಾಗ್ಗಳು

Ranil Wickremesinghe Srilanka ಕೊಲ್ಲೂರು ಉಡುಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ