ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ

Theft at the historic temple

21-11-2017

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಹಾರೋಹಳ್ಳಿಯಲ್ಲಿನ, ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ನಿನ್ನೆ ರಾತ್ರಿ ದೇವಸ್ಥಾನದ ಬಾಗಿಲು ಮುರಿದು, ದೇವರ ಚಿನ್ನಾಭರಣ, ಹುಂಡಿ ಹಣ ದೋಚಿ ಪರಾರಿಯಾಗಿದ್ದಾರೆ. ಎಂದಿನಂತೆ ಬೆಳಿಗ್ಗೆ ಪೂಜೆ ಮಾಡಲು ಪೂಜಾರಿ ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪಾಂಡವಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Pandavapura Temple ಚಿನ್ನಾಭರಣ ತನಿಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ